ಕರ್ನಾಟಕ

ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳು ಅಸಲಿ- ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ

Pinterest LinkedIn Tumblr

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಲೋಕಸಭಾ ಚುನಾವಣೆ ವೇಳೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಆ ವಿಡಿಯೋಗಳು ನಕಲಿಯಾಗಿದ್ದು ಎಡಿಟ್ ಎಂದು ಹೇಳಲಾಗಿತ್ತು. ಆದರೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ​ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್​, ಮಾರ್ಫ್​ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ.

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆ ವಿಡಿಯೋ ನಕಲಿ, ಎಡಿಟ್, ಮಾರ್ಫಿಂಗ್​ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ವಿಶೇಷ ತನಿಖಾ ತಂಡ ಎಸ್​ಐಟಿ ವಿಡಿಯೋಗಳ ಅಸಲಿಯತ್ತು ತಿಳಿಯಲು ಎಫ್​ಎಸ್​ಎಲ್​ಗೆ ಕಳುಹಿಸಿತ್ತು. ಇದೀಗ ವಿಡಿಯೋಗಳ ಎಫ್​ಎಸ್​ಎಲ್​ ವರದಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ಸಾಬೀತಾಗಿದೆ. ​​

ಇನ್ನು ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂಧಿತ ಆರೋಪಿಯೇ ಎಂಬುದು ಇನ್ನೂ ಸಾಬೀತಾಗಿಲ್ಲ. ಈ ಸಂಬಂಧ ಇನ್ನಷ್ಟೇ ವರದಿ ಬರಬೇಕಿದೆ.

Comments are closed.