ಕರಾವಳಿ

ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಶಂಕಿತ ಕಾಲಾರ ಭೀತಿ

Pinterest LinkedIn Tumblr

ಬೈಂದೂರು: ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಕಳೆದೊಂದು ವಾರದಿಂದ ಶಂಕಿತ ಕಾಲಾರ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪ್ರದೀಪ್ ಹಾಗೂ ಆರೋಗ್ಯ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯಿತಿಯಿಂದ ಸರಬರಾಜಾಗುತ್ತಿರುವ ಕುಡಿಯುವ ನೀರಿನಿಂದ ಈ ರೋಗ ಕಾಣಿಸಿಕೊಂಡಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ನೀರಿನ ಸ್ಯಾಂಪಲ್‌ನ್ನು ಟೆಸ್ಟ್‌ಗೆ ಕಳುಹಿಸಿ, ಅದರ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖಾಧಿಕಾರಿಗಳು ಜನರಿಗೆ ಭರವಸೆ ನೀಡಿದರು.

ಈ ಸಂದರ್ಭ ಉಪ್ಪುಂದ ಗ್ರಾ.ಪಂ. ಅಧ್ಯಕ್ಷ ಮೋಹನಚಂದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ, ತಾಲೂಕು ವೈದ್ಯಾಧಿಕಾರಿ ಡಾ. ರಾಜೇಶ್, ಬೈಂದೂರು ಠಾಣಾಧಿಕಾರಿ ತಿಮ್ಮೇಶ್, ಉಪ್ಪುಂದ ಗ್ರಾ.ಪಂ. ಪಿಡಿಓ ಸುದರ್ಶನ ಎಸ್., ಕಾರ್ಯದರ್ಶಿ ಗಿರಿಜಾ, ಕರಾವಳಿ ಕಾವಲುಪಡೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

5-6ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಗಂಭೀರ ‌ಸಮಸ್ಯೆ ಇಲ್ಲ, ಹೆಚ್ಚು ಜನರು ಗುಣಮುಖರಾಗಿದ್ದಾರೆ ಎನ್ನಲಾಗಿದೆ.

Comments are closed.