ಬೆಂಗಳೂರು: ಸ್ಯಾಂಡಲ್ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕನ್ನಡದ ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ. ಅವರ ಅಪಾರ್ಟ್ ಮೆಂಟ್ ನಿಂದ ಕೊಳೆತ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸಾಲಗಾರರ ಕಿರುಕುಳದಿಂದ ಬೇಸತ್ತು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ನಲ್ಲಿ ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ʼಮಠʼ, ʼಎದ್ದೇಳು ಮಂಜುನಾಥʼ, ʼಡೈರೆಕ್ಟರ್ ಸ್ಪೆಷೆಲ್ʼ ʼಎರಡನೇ ಸಲʼ, ʼರಂಗನಾಯಕʼ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದರು. ಅಲ್ಲದೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಸದ್ಯ ʼಅಡೆಮಾʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತು.
Comments are closed.