ಕರಾವಳಿ

ಮಕ್ಕಳ ಹಕ್ಕುಗಳು, ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ

Pinterest LinkedIn Tumblr

ಕುಂದಾಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ, ಬಾಲ್ಯ ವಿವಾಹ, ಆರ್.ಟಿ.ಇ ಭ್ರೂಣ ಹತ್ಯೆ , ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಬೈಂದೂರು ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ತಿಪ್ಪೇಸ್ವಾಮಿ ಕೆ. ಟಿ ಮಾನ್ಯ ಸದಸ್ಯರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ ವಹಿಸಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಯೋಗೀಶ್ ಪಿ. ಆರ್ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಅನುರಾಧ ನಿರೂಪಣಾಧಿಕಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ನಾಗೇಶ್ ನಾಯಕ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೈಂದೂರು ತಾಲೂಕು, ಉಮೇಶ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಂದಾಪುರ, ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ನಾಯ್ಕ್ ಆಗಮಿಸಿದ್ದರು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ದುಲ್ಸಿನ್ ಕ್ರಾಸ್ತಾ ಆಗಮಿಸಿದ್ದರು. ನಾಗರತ್ನ ನಾಯಕ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಡುಪಿ ಜಿಲ್ಲೆ ಇವರು ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಜ್ಯೋತಿ ರವರು ಕಾರ್ಯಕ್ರಮದ ನಿರೂಪಿಸಿದರು.

Comments are closed.