ಕರಾವಳಿ

ತ್ರಾಸಿ ಸಮುದ್ರದಲ್ಲಿ ಜೆಟ್‌ಸ್ಕೀ ಬೋಟ್ ಮಗುಚಿ ರೈಡರ್ ನಾಪತ್ತೆ, ಪ್ರವಾಸಿಗನ ರಕ್ಷಣೆ

Pinterest LinkedIn Tumblr

ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಪ್ರವಾಸಿಗನನ್ನು ರಕ್ಷಿಸಲಾಗಿದೆ.

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗರನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ. ರೈಡ್ ಮಾಡುತ್ತಿದ್ದ ರೋಹಿದಾಸ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.

ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು.

ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Comments are closed.