Karnataka

ಅಮೆರಿಕಾದಲ್ಲಿ ನಟ ಶಿವರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ನಟ ಶಿವರಾಜಕುಮಾರ್ ಅವರಿಗೆ ಇಂದು (ಡಿ.24) ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ನಡೆಯಲಿರುವ ಹಿನ್ನೆಲೆ ಕರೆ ಮಾಡಿ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’.

‘ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು
ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ’ ಎಂದು ಸಿಎಂ ಬರೆದುಕೊಂಡಿದ್ದಾರೆ.

Comments are closed.