ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್ಮೆಂಟ್ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕೃತ್ಯದ ಅರೊಪಿಗಳಾಸ ಕೊಪ್ಪ ಮೂಲದ ರಘುನಂದನ ಎಂ.ಡಿ., ದಾವಣಗೆರೆಯ ಅಮೀನಾ ಬೇಗಂ ಅವರನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಉಡುಪಿ ಪೊಲೀಸ್ ಉಪಾಧೀಕ್ಷಕ ಪ್ರಭು ಅವರ ನಿರ್ದೇಶನದಂತೆ ಮಣಿಪಾಲ ಠಾಣೆಯ ಪಿ.ಐ ದೇವರಾಜ್ ಟಿ.ವಿ ನೇತೃತ್ವದಲ್ಲಿ ಪಿಎಸ್ಐ ಅನೀಲ್, ಎಎಸ್ಐ ವಿವೇಕ್ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ ರವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹಾಸನ ಜಿಲ್ಲೆಯ ಹಿರೀಸಾವೆ ಗ್ರಾಮದ ರವೀಶ್ ಎಂಬ ಆರೋಪಿ ಬಂಧನಕ್ಕೆ ಮಣಿಪಾಲ ಠಾಣಾ ಪಿ.ಐ ದೇವರಾಜ್ ಟಿ ವಿ ನೇತೃತ್ವದ ತಂಡ ತನಿಖೆ ಮುಂದುವರೆಸಿದೆ.
ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.