ಆರೋಗ್ಯ

ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ!

Pinterest LinkedIn Tumblr

ಬೆಂಗಳೂರು: ಚೀನಾದಲ್ಲಿ ಇತ್ತೀಚೆಗೆ ಹೊಸದೊಂದು ಸೋಂಕು ಎಚ್‌ಎಂಪಿವಿ (HMPV) ಹಬ್ಬುತ್ತಿರುವ ಆತಂಕದ ನಡುವೆ ಕರ್ನಾಟಕದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎಂಟು ತಿಂಗಳ ಮಗುವಿನಲ್ಲಿ ಶಂಕಿತ ಸೋಂಕಿನ ಲಕ್ಷಣಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿಯೂ ಪತ್ತೆಯಾದ ಮೊದಲ HMPV ಪ್ರಕರಣ ಇದಾಗಿದೆ ಎನ್ನಲಾಗುತ್ತಿದೆ.

ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.

Comments are closed.