ಕರಾವಳಿ

ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ: ಕೋಟ್ಯಾಂತರ ರೂ. ನಗ-ನಗದು ದೋಚಿ ಪರಾರಿ | ಆರೋಪಿಗಳ ಪತ್ತೆಗೆ ಸಿಎಂ ಸೂಚನೆ

Pinterest LinkedIn Tumblr

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ (ಜ.17) ಮಧ್ಯಾಹ್ನ ಹಾಡಹಗಲೇ ಬ್ಯಾಂಕ್‌ ಗೆ ನುಗ್ಗಿದ ಖದೀಮರ ಗುಂಪು ಹತ್ತು ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದೆ.

ಒಟ್ಟು ಆರು ಜನರಿದ್ದ ದರೋಡೆಕೋರರ ತಂಡವು ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಗೆ ನುಗ್ಗಿ, ಪಿಸ್ತೂಲು ಮತ್ತು ತಲವಾರು ತೋರಿಸಿ ಲೂಟಿ ಮಾಡಿದೆ. ಕೆ.ಸಿ.ರೋಡು ಜಂಕ್ಷನ್‌ ನಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆ ಕಾರಣ ಜನಸಂಚಾರ ವಿರಳವಾಗಿತ್ತು. ಇದೇ ಸಮಯ ನೋಡಿಕೊಂಡು ದರೋಡೆಕೋರರ ಗುಂಪು ಬ್ಯಾಂಕ್‌ ಗೆ ದಾಳಿ ನಡೆಸಿದೆ.

ಗ್ಯಾಂಗ್‌ ನಲ್ಲಿ ಆರು ಜನರಿದ್ದು, ಐವರು ಬ್ಯಾಂಕ್‌ ಗೆ ನುಗ್ಗಿ ಓರ್ವ ರಸ್ತೆಯಲ್ಲಿದ್ದ. ಪಿಸ್ತೂಲು ಮತ್ತು ತಲವಾರು ತೋರಿಸಿದ ಗ್ಯಾಂಗ್‌ ಬ್ಯಾಂಕ್‌ ನಿಂದ ಸುಮಾರು ಐದು ಲಕ್ಷ ರೂ ಹಣ ಮತ್ತು ಚಿನ್ನದ ಆಭರಣಗಳನ್ನು ದೋಚಿದೆ. ಒಟ್ಟು ಹತ್ತು ಕೋಟಿ ರೂ ಮೌಲ್ಯದ ದರೋಡೆ ಮಾಡಲಾಗಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

Comments are closed.