ಉಡುಪಿ: ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಈ-ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ.
ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಾಹಿತಿಯ ಪ್ರಕಾರ 600 ವಿದ್ಯಾರ್ಥಿಗಳಿದ್ದಾರೆಂದು ತಿಳಿದುಬಂದಿದೆ.
Comments are closed.