ಕರ್ನಾಟಕ

ಪೋಕ್ಸೋ ಕೇಸ್​: ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು; ಪ್ರಕರಣ ರದ್ಧತಿಗೆ ನಕಾರ!

Pinterest LinkedIn Tumblr

 

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದು ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದಿತ್ತು ಎನ್ನುವ ಆರೋಪ ಮಾಡಿ ಮಹಿಳೆ ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.

ಫೆಬ್ರವರಿ 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

 

Comments are closed.