ಕರಾವಳಿ

ಶಿರ್ವದಲ್ಲಿ ಟಿಪ್ಪರ್ ಪಲ್ಟಿಯಾಗಿ ಬೈಂದೂರು ಮೂಲದ ಚಾಲಕ ದಾರುಣ ಮೃತ್ಯು

Pinterest LinkedIn Tumblr

ಉಡುಪಿ: ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಫೆ.25ರಂದು ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಬೈಂದೂರಿನ ಸುಬ್ರಹ್ಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ.

ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ಟಿಪ್ಪರ್ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಉರುಳಿಬಿದ್ದಿದೆ. ಈ ವೇಳೆ ಅದರ ಚಾಲಕ ಸುಬ್ರಹ್ಮಣ್ಯ ಟಿಪ್ಪರ್ ಅಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Comments are closed.