ಬೆಂಗಳೂರು: ಅಮವಾಸ್ಯೆ ಹಿಂದಿನ ದಿನ ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಇಂದು (ಭಾನುವಾರದಿಂದ) ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ.
ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಮಾಹಿತಿ ಹಂಚಿಕೊಂಡಿದ್ದಾರೆ. ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದ್ದು ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ವ್ರತ ಆರಂಭಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ.
ಬೆಳಗಿನ ಜಾವ ಊಟೋಪಚಾರವನ್ನು ಮುಗಿಸಿದ ಮುಸ್ಲಿಂ ಬಾಂಧವರು ಒಂದು ತಿಂಗಳ ಉಪವಾಸ ಕೈಗೊಳ್ಳಲಿದ್ದಾರೆ. ಇಂದು ಮುಂಜಾನೆಯೇ ಮಸೀದಿಗೆ ಹೋಗಿ ನಮಾಜ್ ಮಾಡಿಬಂದರು. ಕೆಲವರು ಮನೆಗಳಲ್ಲಿಯೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು. ಕೆಲವು ದೇಶಗಳಲ್ಲಿ ನಿನ್ನೆ ರಂಜಾನ್ ಉಪವಾಸ ಆರಂಭವಾಗಿದ್ದು ಭಾರತದಲ್ಲಿ ಒಂದು ದಿನ ತಡವಾಗಿ ಶುರುವಾಗಿದೆ. ಮಾರ್ಚ್ 2ರಿಂದ ಆರಂಭವಾಗಿ 31ರವರೆಗೆ ಇರಲಿದೆ ಎಂಬುದು ಮುಸ್ಲಿಂ ಧರ್ಮಗುರುಗಳು ಮಾಹಿತಿ ನೀಡಿದ್ದಾರೆ.
Comments are closed.