ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಡೀಸೆಲ್ ದರ ಏರಿಕೆ ಮಾಡಿ ವಾಹನ ಸವಾರರಿಗೆ ಶಾಕ್ ನೀಡಿತ್ತು. ಇದೀಗ ಕೇಂದ್ರ ಸರ್ಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರೂ ಹೆಚ್ಚಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಂಗಳವಾರದಿಂದ ಜಾರಿಗೆ ಬರಲಿದೆ.
ಅಮೆರಿಕದ ಆಡಳಿತವು ವಿಧಿಸಿರುವ ಸುಂಕಗಳ ಪರಿಣಾಮವಾಗಿ, ಜಾಗತಿಕ ಕಚ್ಚಾ ತೈಲ ಬೆಲೆಗಳು ವಾಸ್ತವವಾಗಿ ಕುಸಿಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಏತನ್ಮಧ್ಯೆ, ಅಬಕಾರಿ ಸುಂಕ ಹೆಚ್ಚಳದ ಹೊರತಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳು ಬದಲಾಗುವ ಸಾಧ್ಯತೆಯಿಲ್ಲ ಎಂದು ಉದ್ಯಮ ಮೂಲಗಳು ತಿಳಿಸಿವೆ.
ಸರ್ಕಾರ ಹೊರಡಿಸಿದ ಆದೇಶದಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ. ಹೆಚ್ಚಿಸಲಾಗಿದೆ ಎಂದು ತಿಳಿಸಲಾಗಿದೆ. ಆದೇಶವು ಚಿಲ್ಲರೆ ಬೆಲೆಗಳ ಮೇಲೆ ಬೀರುವ ಪರಿಣಾಮವನ್ನು ನಿರ್ದಿಷ್ಟಪಡಿಸದಿದ್ದರೂ, ಚಿಲ್ಲರೆ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ ಎಂದು ಉದ್ಯಮ ಮೂಲಗಳು ತಿಳಿಸಿವೆ.
Comments are closed.