ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ

Pinterest LinkedIn Tumblr

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮಾರ್ಚ್ 01 ರಿಂದ 20 ರವರೆಗೆ ನಡೆಸಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನಿಯಾಗಿದೆ. ದಕ್ಷಿಣ‌ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಬೆಂಗಳೂರು ದಕ್ಷಿಣ 3ನೇ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.

ಮಧ್ಯಾಹ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದರು.

ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

Comments are closed.