ಮಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಗಳಿಸಿದ್ದಾರೆ.
ದಕ್ಷಿಣ ಕನ್ನಡದ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಅಮೂಲ್ಯ ಕಾಮತ್ ಅವರು 600ಕ್ಕೆ 599 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದಿದ್ದು ದಕ್ಷಿಣ ಕನ್ನಡದ ಜಿಲ್ಲೆಯ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ಅವರು 600 ಕ್ಕೆ 599 ಅಂಕ ಗಳಿಸಿ ಕಾಮರ್ಸ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಅಂತೆಯೇ ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ 597 ಅಂಕ ಗಳಿಸಿ ಮೊದಲ ರ್ಯಾಂಕ್ ಪಡೆದಿದ್ದಾರೆ.
Comments are closed.