ಮಂಗಳೂರು : ವೇಗವಾಗಿ ಬಂದ ಫಾರ್ಚ್ಯುನರ್ ಕಾರೊಂದು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ ಎರಡು ಕಾರು ಹಾಗೂ ಮೂರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಜಖಂ ಗೊಳಿಸಿದ ಘಟನೆ ಗುರುವಾರ ಉರ್ವಾಸ್ಟೋರ್ ಬಳಿ ನಡೆದಿದೆ.
ಚಾಲಕನ ಅಜಾಗುರತೆ ಹಾಗೂ ಬೇಜಾವ್ದಾರಿಯುತ ಅತೀವೇಗದ ಚಾಲನೆಯಿಂದ ಉಂಟಾದ ಈ ಸರಣಿ ಅಪಘಾತದಲ್ಲಿ ಒಂದು ಮಾರೂತಿ ರಿಟ್ಜ್ ಕಾರು, ಒಂದು ವ್ಯಾಗನರ್ ಕಾರು ಮತ್ತು ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಅದೃಶ್ಯವಶಾತ್ ಅಪಘಾತದಲ್ಲಿ ಯಾರಿಗೂ ಯಾವೂದೇ ಅಪಾಯ ಸಂಭವಿಸಲಿಲ್ಲ.
ಫಾರ್ಚ್ಯುನರ್ ಕಾರಿನ ಚಾಲಕ ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸುತಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದ ಪರಿಣಾಮ ಈ ಸರಣಿ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತವಾದ ತಕ್ಷಣ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ತಡೆಯುಂಟಾಯಿತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಉರ್ವಾ ಠಾಣಾ ಪೊಲೀಸರು ಸ್ಥಳದಲ್ಲಿದ್ದ ಜನರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.