ವರದಿ : ಈಶ್ವರ ಎಂ. ಐಲ್ / ಚಿತ್ರ,: ದಿನೇಶ್ ಕುಲಾಲ್
ಮುಂಬಯಿ : ಬಂಟರ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ನೂತನ ಕಾರ್ಯಕ್ರಮಗಳ ಉದ್ಘಾಟನೆಯು ಜ. 4 ರಂದು ಕುರ್ಲಾ ಪೂರ್ವದ ಬಂಟರ ಭವನದ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ವಹಿಸಿದ್ದು, ನೂತನ ಸಮಿತಿಯನ್ನು ಅಭಿನಂದಿಸಿದರು. ಬಂಟ ಸಮಾಜದ ಸಂಸ್ಕೃತಿಯು ಉನ್ನದ ಮಟ್ಟದಾಗಿದ್ದು ಇದನ್ನು ಮರೆಯಬಾರದು ಎಂದು ಮುಖ್ಯವಾಗಿ ಸಮಾಜದ ಯುವ ಜನಾಂಗಕ್ಕೆ ಕಿವಿಮಾತನ್ನು ಹೇಳಿದರು. ಅಂತರ್ಜಾತೀಯ ವಿವಾಹದಿಂದ ನಮ್ಮ ಸಂಸ್ಕೃತಿಗೆ ಮಾರಕವಾಗಬಹುದು ಎಂದೂ ಅವರು ಅಭಿಪ್ರಾಯಪಟ್ಟರು. ಈ ಸಮಿತಿಯ ನೂತನ ಕಾರ್ಯಾಧ್ಯಕ್ಷ ರವೀಂದ್ರನಾಥ ಬಂಡಾರಿಯವರ ಕೊಡುಗೆ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದರು.
ಆಶೀರ್ವಚನ ನೀಡಿದ ವಿಧ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಅವರು ಊರಿಂದ ಬರುವಾಗ ನಾವು ಏನನ್ನೂ ತಾರದಿದ್ದರೂ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ತಂದಿದ್ದೇವೆ. ಬಂಟ ಸಮಾಜದವರಿಂದ ಮುಂಬಯಿಯಲ್ಲಿ ತುಳುನಾಡು ಸೃಷ್ಟಿಯಾಗಿದೆ ಎಂದರು.
ಸಂಘಕ್ಕೆ ವಿವಿಧ ರೀತಿಯಲ್ಲಿ ಸೇವೆ ಸಲ್ಲಿಸಿದ ಆನಂದ ಪಿ. ಶೆಟ್ಟಿ ದಂಪತಿ ಸಮೇತ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಮಾತನಾಡುತ್ತಾ ಈ ಸಂಘದಲ್ಲಿ ಎಲ್ಲರೂ ನಿಸ್ವಾರ್ಥ ಸೇವೆ ಮಾಡುತ್ತಿದ್ದು ಆನಂದ ಪಿ. ಶೆಟ್ಟಿ ಮಾಡಿದ ಈ ಸನ್ಮಾನವು ಅರ್ಥಪೂರ್ಣವಾಗಿದೆ ಎಂದರು.
ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿಯವರು ಹಾಗೂ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಇನ್ನ ಅವರು ಗೌರವ ಅತಿಥಿಯಾಗಿ ಉಪಸ್ಥಿತರಿದ್ದು ನೂತನ ಸಮಿತಿಗೆ ಶುಭ ಕೋರಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ, ಉಳ್ತೂರು ಮೋಹನ್‌ದಾಸ್‌ಶೆಟ್ಟಿ, ಕಿಶೋರ್ ಶೆಟ್ಟಿ ಕುತ್ಯಾರ್, ಮಹೇಶ್‌ಎಸ್. ಶೆಟ್ಟಿ, ಲತಾ ಜೆ. ಶೆಟ್ತಿ, ವಿವೇಕ್ ಶೆಟ್ಟಿ, ರವೀಂದ್ರನಾಥ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಅಶೋಕ್ ಪಕ್ಕಳ ಮತ್ತು ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿಸಿದರು.
ಮನೋರಂಜನೆಯ ಅಂಗವಾಗಿ ಎರ್ಮಾಳ್ ಗಣೇಶ ಅವರಿಂದ ಸಂಗೀತ ರಸಮಂಜರಿ ಹಾಗೂ ಗಣೇಶ್ ಕುದ್ರೋಳಿಯವರಿಂದ ವಿಸ್ಮಯ ಜಾದೂ ಪ್ರದರ್ಶನ ಗೊಂಡಿತು.