ಕನ್ನಡ ವಾರ್ತೆಗಳು

ಜ26 , ಗಣರಾಜ್ಯೋತ್ಸವ : ಬಹುಭಾಷಾ ಕವನಗಳ ಆಹ್ವಾನ

Pinterest LinkedIn Tumblr

pradeep_kumar_kalkura

ಮಂಗಳೂರು,ಜ.19 : ಜನವರಿ ೨೬ರಂದು ಗಣರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಹು ಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ. ಈ ಕವಿಗೋಷ್ಠಿಯಲ್ಲಿ ಪ್ರಸ್ತುತ ಪಡಿಸುವರೇ ಕನ್ನಡ, ತುಳು, ಕೊಂಕಣಿ, ಮರಾಠಿ, ಅರೆಬಾಷೆ, ಸಂಸ್ಕೃತ, ಮಳಯಾಳಿ, ಬ್ಯಾರಿ, ಕೊಡವ, ಹಿಂದಿ ಇತ್ಯಾದಿ ಬಹುಭಾಷೆಗಳ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಪ್ರತಿಭಾನ್ವಿತ ಕವಿಗಳು ತಾವೇ ರಚಿಸಿದ ಕವನಗಳನ್ನು ಜನವರಿ ೨೪ರೊಳಗೆ ಅಧ್ಯಕ್ಷರು, ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಕಾಂಪ್ಲೆಕ್ಸ್, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಲು ಕೋರಲಾಗಿದೆ‌ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು‌ ಅಧ್ಯಕ್ಷ‌ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

Write A Comment