ಮಂಗಳೂರು, ಮಾ.12 : ಮಂಗಳೂರಿನ ಯುರೋಲಜಿ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯ ಹಲವು ಪ್ರಮುಖ ಸಾಮಾಜಿಕ ಸಂಘಟನೆಗಳ ಸಹಯೋಗದೊಂದಿಗೆ ಗುರುವಾರ ಕಿಡ್ನಿ ರೋಗಿಗಳ ಸಮಾವೇಶ ಹಾಗೂ ವಿಶ್ವ ಕಿಡ್ನಿ ದಿನಾಚರಣೆಯು ನಗರದ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ನಡೆಯಿತು.
ಸಮಾವೇಶದಲ್ಲಿ ಕಿಡ್ನಿರೋಗ ತಜ್ಞ ಡಾ.ವಿವೇಕ್ ಪಾಠಕ್ ಕಿಡ್ನಿ ರೋಗದ ಬಗ್ಗೆ ವಿಷಯ ಮಂಡಿಸಿದರು. ಈ ಸಂಧರ್ಭದಲ್ಲಿ ಕಿಡ್ನಿ ಎಕ್ಸ್ಪೊ ವಸ್ತು ಪ್ರದರ್ಶನವಿದ್ದು, ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಿಡ್ನಿ ಆರೋಗ್ಯ ಅಭಿಯಾನ ಸಂಘಟನಾ ಸಮಿತಿಯ ಅಧ್ಯಕ್ಷ ಎಸ್. ಗಣೇಶ್ ರಾವ್ , ಸಮಿತಿ ಉಪಾಧ್ಯಕ್ಷ ಸುದೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಉಮರ್ ಯು.ಎಚ್. ಮಂಗಳೂರು ಯುರೋಲಜಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಮುಹಮ್ಮದ್ ಸಲೀಮ್, ಕರ್ನಾಟಕ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯ ಅಧ್ಯಕ್ಷ. ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.