ಕನ್ನಡ ವಾರ್ತೆಗಳು

ಕದ್ರಿ ಪಾರ್ಕ್‌ನಲ್ಲಿ ಸಂಗೀತ ಕಾರಂಜಿಗೆ ಶಿಲಾನ್ಯಾಸ

Pinterest LinkedIn Tumblr

Kadri_park_watarfont_1

ಮಂಗಳೂರು,ಮಾರ್ಚ್.21  :  ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಮತ್ತು ತೋಟಗಾರಿಕೆ ಇಲಾಖೆ ಇವರ ಸಹಭಾಗಿತ್ವದಲ್ಲಿ ಕದ್ರಿಯ ಹಿಂದಿನ ಜಿಂಕೆ ಉದ್ಯಾನವನದಲ್ಲಿ ಸುಮಾರು 4.97 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಾಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಇದರೊಂದಿಗೆ ಸ್ಪೆಷಲ್ ಪೊಲೀಸ್ ಫೋರ್ಸ್ ವಸತಿಗೃಹಕ್ಕೂ ಶಂಕುಸ್ಥಾಪನೆ ಮಾಡಲಾಯಿತು. ನಗರಾಭಿವೃದ್ಧಿ ಖಾತೆ ಸಚಿವ ವಿನಯ ಕುಮಾರ್ ಸೊರಕೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಈ ಎರಡೂ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಬೆಂಗಳೂರು ಹೊರತು ಪಡಿಸಿದರೆ ಮಂಗಳೂರು ಎರಡನೇ ಸ್ಥಾನದಲ್ಲಿದೆ. ಕರಾವಳಿ ಪ್ರದೇಶದಲ್ಲಿ ಪ್ರವಾಸೋಧ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮಂಗಳೂರನ್ನು ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದೆ ಎಂದರು.

Kadri_park_watarfont_2 Kadri_park_watarfont_4 Kadri_park_watarfont_3a Kadri_park_watarfont_5a

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಮಂಗಳೂರು ನಗರವನ್ನು ಸುಂದರ ನಗರವನ್ನಾಗಿ ರೂಪಿಸಲು ಸರ್ವ ಪ್ರಯತ್ನ ಮಾಡಲಾಗುವುದು. ಬೇರೆ ನಗರಗಳಿಗೆ ಹೋಲಿಸಿದರೆ ಮಂಗಳೂರಲ್ಲಿ ಪಾರ್ಕ್, ಮೈದಾನಗಳು ತೀರಾ ಕಡಿಮೆಯಿದ್ದು ಬಂಟ್ವಾಳದಲ್ಲಿ ಇನ್ನೂ ಎರಡು ಪಾರ್ಕ್ ನಿರ್ಮಿಸಲಾಗುವುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್, ಶಾಸಕ ಜೆ.ಆರ್.ಲೋಬೋ, ಬಿ.ಎ.ಮೊಯ್ದೀನ್ ಬಾವಾ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ, ಮಾಜಿ ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಕೊಂಕಣಿ ಸಾಹಿತ್ಯ ಅಕಾಡೇಮಿ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ, ಮೇಯರ್ ಜೆಸಿತಾ, ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ ಹಾಗೂ ಕಾರ್ಪೊರೇಟರ್ ಗಳು ಉಪಸ್ಥಿತರಿದ್ದರು.

Write A Comment