ಕನ್ನಡ ವಾರ್ತೆಗಳು

ಪ್ರಿಯತಮೆಯೊಂದಿಗೆ ಮನಸ್ತಾಪ: ಪ್ರಿಯಕರ ನೇಣು ಬಿಗಿದು ಆತ್ಮಹತ್ಯೆ

Pinterest LinkedIn Tumblr

hanging

ಉಡುಪಿ: ಪ್ರೀತಿಸುತ್ತಿದ್ದ ಹುಡುಗಿ ಜತೆಗೆ ಮನಸ್ತಾಪ ಉಂಟಾಗಿದ್ದರಿಂದ ಮನನೊಂದು ಯುವಕನೊಬ್ಬ ಶುಕ್ರವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹನೇಹಳ್ಳಿ ಗ್ರಾಮ ರಂಗನಕೆರೆ ಶೆಟ್ಟಿಗಾರ್ ಇಂಡಸ್ಟ್ರೀಸ್ ಕಾರ್ಮಿಕ, ಪಶ್ಚಿಮ ಬಂಗಾಳದ ಪಾರ್ವತಿಪುರ ಸುಲೈ ಇಟಾರ ನಿವಾಸಿ ಸಜನ್‌ಕರ್(23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಶೆಟ್ಟಿಗಾರ್ ಇಂಡಸ್ಟ್ರೀಸ್ ಆವರಣದ ಶೆಡ್‌ನಲ್ಲಿ ತನ್ನೂರಿನ ಇತರರ ಜತೆಗೆ ವಾಸವಾಗಿದ್ದುಕೊಂಡು ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಮಲಗಿದ್ದು, ಶುಕ್ರವಾರ ಮುಂಜಾನೆ ನೋಡುವಾಗ ಕಂಡಿರಲಿಲ್ಲ. ಪಕ್ಕದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ ತಾನೂ ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಮನಸ್ತಾಪ ಉಂಟಾಗಿದ್ದರಿಂದ ನೊಂದು  ಈ ಕೃತ್ಯ ಎಸಗಿದ್ದಾನೆ ಎಂದು ಇಟಾರ ಸುಶಾಂತ್ ಮಂಡಲ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment