ಉಳ್ಳಾಲ,ಎ.06 : ಕೋಟೆಕಾರು ಗ್ರಾಮದ ಕೊಂಡಾಣ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭರತ್ ಎಂಬವರ ಮೊಬೈಲ್ ಅಂಗಡಿಯೊಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, 40ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಭರತ್ ಎಂಬವರ “ಸಾಯಿರಾಂ’ ಫ್ಯಾನ್ಸಿ ಮತ್ತು ಮೊಬೈಲ್ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಐದು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಭರತ್ ಅವರು ಅಂಗಡಿ ನಡೆಸುತ್ತಿದ್ದರು.
ಕೊಂಡಾಣ ಬಳಿ ಇರುವ ಅಂಗಡಿಯಲ್ಲಿ ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಂಗಡಿ ಮಾಲಕ ಭರತ್ ಅವರಿಗೆ ವಿಷಯ ಮುಟ್ಟಿಸಿದರು. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿಲಾಗಿತ್ತು. ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸುವಷ್ಟರಲ್ಲಿ ಅಂಗಡಿಯೊಳಗಿನ ಸೊತ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಕಳೆದ ಐದು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಭರತ್ ಅವರು ಅಂಗಡಿ ನಡೆಸುತ್ತಿದ್ದರು.
ಬ್ಯಾಂಕ್‌ನಲ್ಲಿ ಸಾಲ ಪಡೆದು ಅಂಗಡಿಯನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಮೆಸ್ಕಾಂನ ಅಧಿಕಾರಿಗಳು ಭೇಟಿ ನೀಡಿದ್ದಾರೆ.