ಮುಡಿಪು. ಮೇ 21: ಸರಕಾರಿ ಪದವಿ ಪೂರ್ವ ಕಾಲೇಜು ಕುರ್ನಾಡು ಇದರ 2015 ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಜರಾದ 292 ವಿದ್ಯಾರ್ಥಿಗಳಲ್ಲಿ 284 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 93.83 % ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಲ್ಲಿ 4 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 1ವಿದ್ಯಾರ್ಥಿ ಡಿಸ್ಟಿಂಕ್ಷನ್ನೊಂದಿಗೆ ತೇರ್ಗಡೆಯಾಗಿದ್ದರೆ. 176 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 59 ದ್ವಿತೀಯ ಶ್ರೇಣಿ ಹಾಗೂ 18 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಬಲ್ಕೀಸ್ 548, ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ 566, ಕಲಾವಿಭಾಗದಲ್ಲಿ ಫಾತಿಮತ್ ತಸ್ವ 524 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.