ಪುತ್ತೂರು, ಜುಲೈ.14: ಅನಾರೋಗ್ಯದಿಂದಾಗಿ ಜೀವನದಲ್ಲಿ ಜುಗುವ್ಸೆಗೊಂಡ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದಲ್ಲಿ ಸಂಭವಿಸಿದೆ. ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ರುಕ್ಮಯ ಗೌಡ (60) ಮೃತ ವ್ಯಕ್ತಿ.
ನಾಲ್ಕು ವರ್ಷಗಳ ಹಿಂದೆ ಅವರು ಚಿಕೂನ್ ಗುನ್ಯಾ ಕಾಯಿಲೆಗೆ ತುತ್ತಾಗಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೂ ನಿತ್ಯ ಕೈಕಾಲುಗಳ ನೋವು ಕಾಡುತ್ತಿದ್ದರಿಂದ ಕೆಲಸ ಮಾಡಲು ಆಗುತ್ತಿರಲಿಲ್ಲ. ಈ ಕಾರಣದಿಂದ ನೊಂದು ಜೀವನದಲ್ಲಿ ಜುಗುಪ್ಸೆಗೊಂಡಿದ್ದ ಅವರು ರವಿವಾರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.