ಮಂಗಳೂರು,ಆಗಸ್ಟ್.05 : ಮಂಗಳೂರಿನ ಕಾಲೇಜುಗಳಲ್ಲಿ ಉದ್ಭವಿಸಿರುವ ಶೈಕ್ಷಣಿಕ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಎಸ್.ಎಫ್.ಐ ವತಿಯಿಂದ ಬುಧವಾರ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತ್ತು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಎಸ್.ಎಫ್.ಐ ನಾಯಕ, ಮಂಗಳೂರು ನಗರ ಶ್ರೈಕ್ಷಣಿಕವಾಗಿ ಸಾಕಷ್ಟು ಮುಂದುವರಿದಿದ್ದರೂ, ಇಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿದೆ. ಸಮಸೈಗಳ ಪರಿಹಾರಕ್ಕೆ ಕೂಡಲೇ ಜಿಲ್ಲಾಡಳಿತಾ ಮುಂದಾಗಬೇಕು. ಶಾಲಾ ಕಾಲೇಜು ಮತ್ತು ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗೆ ಕೂಡಲೇ ಪರಿಹಾರ ಒದಗಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ವಿಪರೀತ ಶುಲ್ಕ ವಸೂಲಾತಿ ಮಾಡುತ್ತಿದ್ದು, ಇದನ್ನು ಕೂಡಲೇ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.