ಮಂಗಳೂರು, ಆಗಸ್ಟ್.15: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಅನುಮತಿಯಿಲ್ಲದೆ ನಗರದ ಎ.ಬಿ.ಶೆಟ್ಟಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ 30 ಬಿಜೆಪಿ ಕಾರ್ಯಕರ್ತರನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಿಥುನ್ ರೈ ಅಸೈಗೋಳಿಯಲ್ಲಿ ನಡೆದ ಯುವ ಕಾಂಗ್ರೆಸ್‌ಸಮಾರಂಭದಲ್ಲಿ ಧ್ವಜಸ್ತಂಭಕ್ಕೆ ಯುವ ಕಾಂಗ್ರೆಸ್ ಧ್ವಜವನ್ನು ಹಾಕಿ ಅವಮಾನ ಮಾಡಿದ್ದರೆಂದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಮಿಥುನ್ ರೈ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಂದು ದಿಢೀರನೆ ಪ್ರತಿಭಟನೆ ನಡೆಸಿದರು. ಆದರೆ ಪ್ರತಿಭಟನೆಗೆ ಅನುಮತಿ ಪಡೆಯದೆ ಇರುವುದರಿಂದ ಅವರನ್ನು ವಶಕ್ಕೆ ಪಡೆದುಕೊಂಡು ಬಿಡುಗಡೆಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.