ಮಂಗಳೂರು, ಆ.23: ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಸಮಾರಂಭ ಶನಿವಾರ ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಮಾತನಾಡಿ, ಸಹಕಾರಿ ಕ್ಷೇತ್ರದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಹಕಾರಿ ಅಧ್ಯಯನ ಪೀಠ ಸ್ಥಾಪಿಸಲು ಸರಕಾರ ದೊಂದಿಗೆ ಒಡಂಬಡಿಕೆಗೆ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾ ರ್ಥ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2014-15ನೆ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹತ್ತನೆ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಗಳು ಹಾಗ್ತೂ ಸಿಬ್ಬಂದಿಗಳು ಮತ್ತು ನವೋದಯ ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಶ್ರೀದೇವಿ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ವಿತರಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಬಾಬು ಬಿಲ್ಲವ, ನಿರ್ದೇಶಕಗಳಾದ ರಾಜು ಪೂಜಾರಿ, ರಘುರಾಮ್ ಶೆಟ್ಟಿ,ಜಯರಾಮ ರೈ, ವಾದಿರಾಜ ಶೆಟ್ಟಿ ಉಪಸ್ಥಿತರಿದ್ದರು.