ಮಂಗಳೂರು,ಆಗಸ್ಟ್.31: ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಯ ಕಚೇರಿ ಉದ್ಘಾಟನೆ ಬಂಟ್ಸ್ ಹಾಸ್ಟೆಲ್ನಲ್ಲಿ ನಡೆಯಿತು. ಯುವ ಉದ್ಯಮಿ ಅಗರಿ ನಿತಿನ್ ಶೆಟ್ಟಿ ಗಣೇಶೋತ್ಸವ ಕಚೇರಿಯ ಉದ್ಘಾಟನೆ ನೆರವೇರಿಸಿದರು.
ಸೆ.17ರಿಂದ 19 ರವರೆಗೆ ಬಂಟ್ಸ್ ಹಾಸ್ಟೆಲ್ನ ಓಂಕಾರನಗರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯ ಕ್ರಮಗಳೊಂದಿಗೆ ಸಾರ್ವಜನಿಕ ಶ್ರೀಗಣೇಶೋತ್ಸವ ನಡೆಯಲಿದೆ ಎಂದು ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಮಾಲಾಡಿ ಅಜಿತ್ಕುಮಾರ್ ರೈ ತಿಳಿಸಿದರು.
ಸಮಾರಂಭದಲ್ಲಿ ಉದ್ಯಮಿ ಜಗನ್ನಾಥ ನಾಕ್, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳಾರ್ಗುತ್ತು. ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಮೇಘನಾಥ ಶೆಟ್ಟಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಮಂಜುನಾಥ ಭಂಡಾರಿ ಶೆಡ್ಡೆ, ಶಶಿರಾಜ್ ಶೆಟ್ಟಿ ಕೊಳಂಬೆ, ಸುಂದರ ಶೆಟ್ಟಿ. ಜಯ ರಾಮ ಸಾಂತ, ಡಾ. ಆಶಾಜ್ಯೋತಿ ರೈ, ಬಿ.ಶೇಖರ ಶೆಟ್ಟಿ, ಕೆ. ಉಮೇಶ್ ರೈ, ಕರುಣಾಕರ ಶೆಟ್ಟಿ ಉಪಸ್ಥಿತರಿದ್ದರು.
ಸಂತಾಪ: ಇತ್ತೀಚೆಗೆ ಅಗಲಿದ ಜಿ.ಪಂ.ಸದಸ್ಯೆ ಯಶವಂತಿ ಆಳ್ವ, ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ ಶ್ರೀಧರ ಶೆಟ್ಟಿ, ನೃತ್ಯಪಟು ಜಯಲಕ್ಷ್ಮೀ ಆಳ್ವ, ನಾಟ್ಯಗುರು ವಿಠಲ ಶೆಟ್ಟಿ, ಬಂಟರ ಸಂಘಗಳ ಒಕ್ಕೂಟದ ಮಾಜಿ ಕಾರ್ಯದರ್ಶಿ ರಂಗನಾಥ ಹೆಗ್ಡೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷ ಜಯಪಾಲ ಶೆಟ್ಟಿ ಹಾಗೂ ಕವಿ ನಾಡೋಜ ಕಯ್ಯಾರ ಕಿಂಞಣ್ಣ ರೈ ಅವರಿಗೆ ಸಮಾರಂಭದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.