ಮಂಗಳೂರು, ಸೆ. 23: ಬಕ್ರೀದ್ ಆಚರಣೆಯ ಹಿನ್ನೆಲೆಯಲ್ಲಿ ಸೆಪ್ಟಂಬರ್ 24ರಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ 24ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಗಳನ್ನು ಸೆಪ್ಟಂಬರ್ 25ರಂದು ಅಥವಾ ಬದಲಿ ದಿನಾಂಕದಂದು ನಡೆಸಲು ಸೂಚಿಸಲಾಗಿದೆ.
ಕರ್ನಾಟಕ ಸರಕಾರ ಈಗಾಗಲೇ ಹೊರಡಿಸಿರುವ ಆದೇಶದ ಪ್ರಕಾರ ಸೆಪ್ಟಂಬರ್ 25ರಂದು ಸರಕಾರಿ ಕಚೇರಿಗಳಿಗೆ (ಶಾಲಾ-ಕಾಲೇಜುಗಳನ್ನು ಹೊರತುಪಡಿಸಿ) ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ಬಗ್ಗೆ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಮಂಗಳೂರು ಇವರು ಸೂಕ್ತ ಕ್ರಮ ಕೈಗೊಳ್ಳಲಿರುವರು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.