ಮೂಡುಬಿದಿರೆ, ಅ.16: ಬಜರಂಗ ದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿಯನ್ನು ಹತ್ಯೆಗೈದ ನೈಜ ಕೊಲೆಗಡುಕರನ್ನು ಪೊಲೀಸರು ಪತ್ತೆ ಹಚ್ಚಬೇಕು. ಯಾವ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆಯಾಗ ಬಾರದು ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅಭಿಪ್ರಾಯಪಟ್ಟರು.
ಕಳೆದ ಶುಕ್ರವಾರ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿಯ ಮನೆಗೆ ಭೇಟಿ ನೀಡಿದ ಅವರು ಪೋಷಕರಿಗೆ ಸಾಂತ್ವನ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಒಂದು ವೇಳೆ ಪ್ರಕರಣದ ತನಿಖೆಗೆ ಅಡ್ಡಿಪಡಿಸಿದಲ್ಲಿ ಅಥವಾ ನಿರಪರಾಧಿಗಳಿಗೆ ಶಿಕ್ಷೆಯಾದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ ಅವರು, ಜಿಲ್ಲೆಯ ಪೊಲೀಸ್ ಅಧಿಕಾರಿಗಳು ರಾಜಕಾರಣಿಗಳ ಒತ್ತಡಕ್ಕೆ ಮಣಿಯಬಾರದು ಎಂದು ಹೇಳಿದರು.
ಈ ಸಂದರ್ಭ ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ಪ್ರವೀಣ್ ವಾಲ್ಕೆ, ಮುಖಂಡರಾದ ಸಮಿತ್ ರಾಜ್ ದರೆಗುಡ್ಡೆ, ಸುಧೀರ್ ದರೆಗುಡ್ಡೆ, ಸುನೀಲ್ ಇರುವೈಲ್ ಉಪಸ್ಥಿತರಿದ್ದರು.