ಕೃಪೆ : ಚರಣ್ ಕೇಕಡ, ಚೇರಂಬಾಣೆ.
ಹಿಂದೂ ಧರ್ಮದಲ್ಲಿ ಮದುವೆ-ಮುಂಜಿ ಹೀಗೆ ಹಲವು ಸಂಪ್ರದಾಯದಕ್ಕೆ ಎಷ್ಟು ಮಹತ್ವವಿದೆಯೇ ಅದೇ ರೀತಿ, ವರ-ವಧುವಿಗೆ ಕಟ್ಟುವ ಕರಿಮಣಿ ಸರಕ್ಕೂ ಅಷ್ಟೇ ಪಾಮುಖ್ಯತೆ ಇದೆ. ಮದುವೆಯ ಸಂಕೇತವಾಗಿ ಸ್ತ್ರಿಯರಿಗೆ ಕರಿಮಣಿ ತಾಳಿ, ಕುಂಕುಮ, ಗಾಜಿನಬಳೆ, ಕಾಲುಂಗರ, ಹೂವು ನೀಡಲಾಗುವುದು; ಅದು ಗೃಹಿಣಿಗೆ ಸೌಭಾಗ್ಯಕರವಾದವು.
ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣವಿದೆಯಲ್ಲ – ಅದರಲ್ಲಿ ‘ಮಾಂಗಲ್ಯ’ ಯಾವುದು, ಮಾಂಗಲ್ಯಧಾರಣದ ಸಂಪ್ರದಾಯ ಹೇಗೆ ಬಂತು, ಬಂಗಾರದೊಡವೆಯಲ್ಲಿ ಕರಿಮಣಿಗಳೇಕೆ, ಕರಿಮಣಿಸರದಲ್ಲಿ ಹವಳವೇಕೆ ಎಂಬುದನ್ನು ನೋಡೋಣ.
ಆದಿಶಂಕರರು ರಚಿಸಿದ ಸೌಂದರ್ಯಲಹರಿಯಲ್ಲಿ, ಶಿವನು ಪಾರ್ವತಿಗೆ ಮಂಗಲಸೂತ್ರವನ್ನು ಕಟ್ಟಿದನೆಂದಿದೆ. ಲಲಿತಾಸಹಸ್ರನಾಮ, ಸೌಂದರ್ಯಲಹರಿಗಳು ಚಾಲ್ತಿಯಿರುವ ಸ್ತೋತ್ರಗಳಾಗಿದ್ದು ಮಾಂಗಲ್ಯಧಾರಣವನ್ನು ಪ್ರಸ್ತಾಪಿಸಿವೆ!
ವಿವಾಹಿತ ಹೆಂಗಸಿನ ಮೇಲೆ ಕೆಟ್ಟದೃಷ್ಟಿ ಬೀಳದಿರಲೆಂದೇ ಮಂಗಲಸೂತ್ರದಲ್ಲಿ ಕಪ್ಪುಬಣ್ಣದ ಮಣಿಗಳಿರುವುದು ಎಂಬ ನಂಬಿಕೆಯಿದೆ.
ಕಪ್ಪು ಮಣಿಗಳಿಗೆ ಋಣಾತ್ಮಕ ಶಕ್ತಿಕ್ಷೇತ್ರವನ್ನೆಲ್ಲ ಹೀರಿಕೊಂಡು ಅದು ವಧುವನ್ನು ಮತ್ತು ಅವಳ ಕುಟುಂಬವನ್ನು ತಗಲದಂತೆ ಮಾಡುವ ಗುಣವಿರುತ್ತದಂತೆ.
ಕರಿಮಣಿಗಳನ್ನು ಒಂದೊಂದಾಗಿ ಪೋಣಿಸಿದಾಗ ಅದೊಂದು ಸುಂದರ ಸರಮಾಲೆಯಾಗುವುದನ್ನು, ಗಂಡಿನ ಕುಟುಂಬವೆಂಬ ಸೂತ್ರದೊಂದಿಗೆ ನವವಿವಾಹಿತ ಹೆಣ್ಣು ಅಷ್ಟೇ ಸುಲಲಿತವಾಗಿ ಹೊಂದಿಕೊಳ್ಳಬೇಕು/
ಹೊಂದಿಕೊಳ್ಳುತ್ತಾಳೆ ಎಂಬ ಆಶಯಕ್ಕೆ ಹೋಲಿಸುತ್ತಾರೆ.
ಕರಿಮಣಿಸರದ ಮತ್ತೊಂದು ವೈಶಿಷ್ಟವೆನೆಂದರೆ ಎದೆಯ ಭಾಗದಲ್ಲಿ ಉಂಟಾಗುವ ಉಷ್ಣತೆಯನ್ನು ಹೀರಿಕೊಳ್ಳುತ್ತದೆ. ಇದರ ಅತಿ ಮುಖ್ಯವಾದ ಉಪಯುಕ್ತತೆ ಹಾಲುಣಿಸುವ ತಾಯಿಯಲ್ಲಿ ಎದೆ ಹಾಲಿನ ಉಷ್ಣತೆಯನ್ನು ಹೀರಿಕೊಂಡು ಎದೆಹಾಲು ಕೆಡದಂತೆ ಶಿಶುವಿಗೆ ಉಣಲೂ ಅನುಕೂಲವಾದ ಸಮ ಉಷ್ಣತೆಯಲ್ಲಿರಿಸಲು ಸಹಾಯ ಮಾಡುತ್ತದೆ.
ಮಂಗಲಸೂತ್ರ ಅಥವಾ ತಾಳಿಯಲ್ಲಿ ಪ್ರಾದೇಶಿಕವಾಗಿ, ಮತಪಂಥಗಳಿಗನುಸಾರವಾಗಿ ಅಲ್ಪಸ್ವಲ್ಪ ವ್ಯತ್ಯಾಸಗಳೂ ಕಂಡುಬರುತ್ತವೆ.
ಬ್ರಾಹ್ಮಣವರ್ಗದಲ್ಲಿ ಎರಡು ಪದಕಗಳ ತಾಳಿ, ಕಾಯಸ್ಥ/ಮರಾಠಾ ಸ್ತ್ರೀಯರಿಗೆ ಒಂದು ಪದಕದ ತಾಳಿ, ವೈಶ್ಯ ಮತ್ತು ಚಿನಿವಾರ ಪಂಗಡಗಳಲ್ಲಿ ಚಿನ್ನ ವಜ್ರ ವೈಢೂರ್ಯಗಳಿರುವ ತಾಳಿ… ಹೀಗೆ ವೈವಿಧ್ಯಗಳು. ವೀರಶೈವ ಸ್ತ್ರೀಯರು ತಾಳಿಯಾಂದಿಗೇ ಲಿಂಗದ ಕರಂಡಕವನ್ನು ಕಟ್ಟಿಕೊಳ್ಳುವುದೂ ಇದೆ.
ದಕ್ಷಿಣಭಾರತದಲ್ಲಿ ಹಿಂದುಗಳಷ್ಟೇ ಅಲ್ಲದೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಮತಸ್ಥ ಸ್ತ್ರೀಯರೂ ವಿವಾಹಾನಂತರ ತಾಳಿ/ಕರಿಮಣಿಸರ ಧರಿಸುತ್ತಾರೆ.
ಗೃಹಿಣಿಯರು ಇಂದು ಸೌಭಾಗ್ಯಕರವಾದ ಇವುಗಳನ್ನು ಧರಿಸುವುದರಲ್ಲಿ ಆಸಕ್ತಿ ವಹಿಸುತ್ತಿಲ್ಲ. ಆದರೆ ಅವುಗಳಿಗಿರುವ ಮಹತ್ವವನ್ನು, ಸಂಪ್ರದಾಯವನ್ನು ಎತ್ತಿಹಿಡಿಯುವ ಗೌರವಾರ್ಹವಾಗುವಂತಹ ಮಂಗಳಕರ ಆಭರಣಗಳನ್ನು ಧರಿಸುವುದರಿಂದ ನಾರಿಯು ಪೂಜನೀಯಳಾಗುತ್ತಾಳೆ.
ಜ್ಯೋತಿಷ್ಯಶಾಸ್ತ್ರ ಗ್ರಂಥಗಳಲ್ಲಿ ಯಾವ ರಾಶಿಯವರು ಎಷ್ಟೆಷ್ಟು ಕರಿಮಣಿಯನ್ನು ಸರದಲ್ಲಿ ಹಾಕಿಕೊಳ್ಳಬೇಕೆಂಬುದನ್ನು ಉಲ್ಲೇಖಿಸಲಾಗಿದೆ.
ರಾಶಿ ಕರಿಮಣಿ
ಮೇಷ 21, ವೃಷಭ 40, ಮಿಥನ 34, ಕಟಕ 20, ಸಿಂಹ 18, ಕನ್ಯಾ 34, ತುಲ 40, ವೃಶ್ಚಿಕ 21, ಧನುಸ್ಸು 32, ಮಕರ 38, ಕುಂಭ 38, ಮೀನ 32.
1 Comment
Majority of the women don’t use this “karimane” should we ask them to wear this ?