ಕನ್ನಡ ವಾರ್ತೆಗಳು

ಬಿಜೆಪಿ ವತಿಯಿಂದ “ಅಂತ್ಯೋದಯ ಸಮಾವೇಶ”

Pinterest LinkedIn Tumblr

Bjp_sagaktna_govitda_1

ಮಂಗಳೂರು,ನ.03: ರಾಜ್ಯದಲ್ಲಿ ಕೊಲೆ, ಅತ್ಯಾಚಾರ, ದರೋಡೆ, ಮರಳು ಮಾಫಿಯಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅದರೆ ಸರಕಾರವು ಯಾವುದಕ್ಕೂ ಕಡಿವಾಣ ಹಾಕುತ್ತಿಲ್ಲ.ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ದ. ಕ. ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶ `ಅಂತ್ಯೋದಯ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದರು.

Bjp_sagaktna_govitda_2 Bjp_sagaktna_govitda_3 Bjp_sagaktna_govitda_4 Bjp_sagaktna_govitda_5 Bjp_sagaktna_govitda_6 Bjp_sagaktna_govitda_7

ಶಿಕ್ಷಣದಿಂದ ಮಾತ್ರ ದೀನ ದಲಿತರ ಉದ್ಧಾರ ಸಾಧ್ಯ. ಆದರೆ ಕಾಂಗ್ರೆಸ್ ಈ ಕೆಲಸವನ್ನು ಮಾಡುತ್ತಿಲ್ಲ. ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಕೊಟ್ಟ ವರದಿಯ ಪ್ರಕಾರ ರಾಜ್ಯದ 1734 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಇಂತಹ ದುಃಸ್ಥಿತಿ ನಿರ್ಮಾಣವಾಗಿದ್ದರೂ ಸರ್ಕಾರಕ್ಕೆ ಗೊಡವೆಯಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯೆದ್ದಿದೆ. ಕೈಗಾರಿಕಾ ಅಭಿವೃದ್ಧಿಯಲ್ಲಿ 11ನೇ ಸ್ಥಾನಕ್ಕೆ ಕುಸಿದಿದ್ದೇವೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಬಿ.ಶ್ರೀರಾಮುಲು ಈ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ಮಾತಾನಾಡಿದರು.

ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್ , ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸುನಿಲ್ ಕುಮಾರ್, ಶಾಸಕ ಎಸ್.ಅಂಗಾರ, ವಿಧಾನ ಪರಿಷತ್ ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್‌, ಸಿದ್ಧರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಮಾಜಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ಅರವಿಂದ ಲಿಂಬಾವಳಿ, ಲಾಲಾಜಿ ಮೆಂಡನ್,ರವಿಕುಮಾರ್, ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ, ಉಪಾಧ್ಯಕ್ಷ ಸತೀಶ್ ಕುಂಪಲ ಮೊದಲಾದವರು ಉಪಸ್ಥಿತರಿದ್ದರು.

Write A Comment