ಕನ್ನಡ ವಾರ್ತೆಗಳು

ಚುನಾವಣೆ ಸಂದರ್ಭ ವಿರೋಧ ಪಕ್ಷಗಳಿಂದ ಆರೋಪಗಳು ಸ್ವಾಭಾವಿಕ : ಸಚಿವ ಯು.ಟಿ.ಖಾದರ್

Pinterest LinkedIn Tumblr

ullala_block_utkadr

ಕೊಣಾಜೆ, ಡಿ.23 : ಚುನಾವಣೆ ದಿನ ಎಲ್ಲರೂ ಒಗ್ಗಟ್ಟಿನಿಂದ ಪ್ರತಾಪ್‌ಚಂದ್ರ ಶೆಟ್ಟಿಯವರಿಗೆ ಮತ ಹಾಕುವ ಮೂಲಕ ಕುರ್ನಾಡು ಮತ್ತು ಉಳ್ಳಾಲ ಬ್ಲಾಕ್‌ನಲ್ಲಿ ಅತ್ಯಂಕ ಮತಗಳಿಂದ ಜಯಗಳಿಸುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.ಕುರ್ನಾಡು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಂಗಳವಾರ ಮುಡಿಪು ಖಾಸಗಿ ಸಭಾಂಗಣದಲ್ಲಿ ನಡೆದ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆ ಸಂದರ್ಭ ವಿರೋಧ ಪಕ್ಷಗಳಿಂದ ಆರೋಪಗಳು ಸ್ವಾಭಾವಿಕವಾಗಿದ್ದು, ಬಿಜೆಪಿ ಮಾಡುತ್ತಿರುವ ಆರೋಪಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಸಚಿವ ಖಾದರ್ ಹೇಳಿದರು. ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿದರು.

ಇದುವರೆಗಿನ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಹಕ್ಕು, ಸಮಸ್ಯೆಗಳ ಬಗ್ಗೆ ವಿಧಾಪರಿಷತ್‌ನಲ್ಲಿ ಧ್ವನಿ ಎತ್ತಿದ್ದೇನೆ. ಈ ಬಾರಿ ಗೆದ್ದಲ್ಲಿ ಮತದಾರರು ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವುದಾಗಿ ಅಭ್ಯರ್ಥಿ ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಮುಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಮಾಜಿ ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಎಪಿಎಂಸಿ ಸದಸ್ಯ ಉಮರ್ ಪಜೀರ್, ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಪದ್ಮನಾಭ ನರಿಂಗಾನ, ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಕೊಣಾಜೆ, ನಾಸಿರ್ ನಡುಪದವು, ಕ್ಷೇತ್ರ ಯುವ ಕಾಂಗ್ರೆಸ್ ಕಾರ್ಯದರ್ಶಿ ಸಮೀರ್ ಪಜೀರ್ ಮೊದಲಾದವರು ಉಪಸ್ಥಿತರಿದ್ದರು.

ಕುರ್ನಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಲೀಲ್ ಮೊಂಟೆಪದವು ಕಾರ್ಯಕ್ರಮ ನಿರೂಪಿಸಿದರು

Write A Comment