ಮಂಗಳೂರು: ಗಲ್ಫ್‌ನಲ್ಲಿ ಕುಳಿತು ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ಅವಹೇಳನಕಾರಿ ಕಮೆಂಟ್ ಪೋಸ್ಟ್ ಮಾಡಿರುವ ವ್ಯಕ್ತಿಯೋರ್ವನ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಲಾಂ ಧರ್ಮ ಪ್ರಚಾರಕ ಡಾ.ಝಾಕೀರ್ ನಾಯ್ಕ್ ಕಾರ್ಯಕ್ರಮ ರದ್ದುಪಡಿಸಿದ್ದನ್ನು ವಿರೋಧಿಸಿ ಅಕ್ಬರ್ ಕುದ್ರೋಳಿ ಎಂಬಾತ ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧವೇ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಕಮೆಂಟ್ ಪೋಸ್ಟ್ ಮಾಡಿದ್ದ ಬಗ್ಗೆ ಆತನ ವಿರುದ್ಧ ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ ಬಗ್ಗೆ ಮಾಹಿತಿ ಪಡೆದ ಬಂದರು ಠಾಣೆ ಪೊಲೀಸರು ಈತನ ವಿರುದ್ಧ ಅವಹೇಳನ, ಬೆದರಿಕೆ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈತ ಗಲ್ಫ್‌ನಲ್ಲಿ ಕುಳಿತು ಈ ಕೃತ್ಯ ನಡೆಸಿರಬೇಕೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.