ಮಂಗಳೂರು,ಜ.13 : ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಚೇರಿಯಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷ ರವಿಶಂಕರ್ ಮಿಜಾರ್‌ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
ಮಾಜಿ ವಿಧಾನಪರಿಷತ್ ಸದಸ್ಯರಾದ ಕೆ.ಬಾಲಕೃಷ್ಣ ಭಟ್ ಸ್ವಾಮಿ ವಿವೇಕಾನಂದರ ಜೀವನದ ಬಗ್ಗೆ ಕಾರ್ಯಕರ್ತರಿಗೆ ತಿಳಿ ಹೇಳಿದರು.
ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ವೇದವ್ಯಾಸ ಕಾಮತ್, ಸುಧೀರ್ ಶೆಟ್ಟಿ ಕಣ್ಣೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರವೀಂದ್ರಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ದಿನಕರ ಶೆಟ್ಟಿ ಧನ್ಯವಾದಗೈದರು.