ಮಂಗಳೂರು,ಜ.18: ಕುಖ್ಯಾತ ದನಗಳ್ಳ ಹಾಗೂ ಕೆಲವು ಪ್ರಕರಣಗಳಲ್ಲಿ ಭಾಗಿಯಾಗಿರುವ, ನ್ಯಾಯಾಲಯದ ವಿಚಾರಣೆ ವೇಳೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಶರೀಫ್ ಅಲಿಯಾಸ್ ಮಿಲಿಟ್ರಿ ಶರೀಫ್ (36 ) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈತ ಮೂಲತ ಕಸಬಾ ಬೆಂಗರೆ ನಿವಾಸಿಯಾಗಿದ್ದು, ಪ್ರಸಕ್ತ ಕುದ್ಕೋರಿಗುಡ್ಡೆಯಲ್ಲಿ ವಾಸಿಸುತ್ತಿದ್ದಾನೆ. ಈತನ ವಿರುದ್ಧ ದ.ಕ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ದನಗಳವು ಪ್ರಕರಣ ದಾಖಲಾಗಿದ್ದು, ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿ ನಿನ್ನೆ ಶರೀಫ್‌ನನ್ನು ಪೊಲೀಸರು ಬಂಧಿಸಿದ್ದಾರೆ.