ಮ೦ಗಳೂರು ಫೆ.02: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 108 ಆರೋಗ್ಯ ಕವಚ ಅಂಬ್ಯುಲೆನ್‌ಗಳಿರುವ 28 ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅಡಚಣೆಯಾಗದಂತೆ ಆರೋಗ್ಯ ಇಲಾಖೆಯಿಂದ 25 ವಾಹನ ಚಾಲಕರು ಮತ್ತು ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ 16 ವಾಹನ ಚಾಲಕರು ಸಾರ್ವಜನಿಕರಿಗೆ ತುರ್ತು ಆರೋಗ್ಯ ಸೇವೆ ನೀಡಲು 2 ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
108 ಆರೋಗ್ಯ ಕವಚ ಅಂಬ್ಯುಲೆನ್ಸ್‌ಗಳಲ್ಲಿ ಶುಶ್ರೂಷಣಾ ಸೇವೆಯನ್ನು ಇಲಾಖೆಯ ಶುಶ್ರೂಷಕಿಯರಿಂದ ಒದಗಿಸಲಾಗಿದೆ. ಜ. 28 ರಂದು56 ರೋಗಿಗಳನ್ನು, ಜ. 29 ರಂದು 57 ರೋಗಿಗಳನ್ನು ಹಾಗೂ ಜ. 30 ರ ಮಧ್ಯಾಹ್ನ 12 ಗಂಟೆಯವರೆಗೆ 24 ಮಂದಿ ರೋಗಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯುವ ಕೆಲಸ ನಿರ್ವಹಿಸಿರುತ್ತಾರೆ.
108 ವಾಹನ ಚಾಲಕರು ಹಾಗೂ ಸಿಬ್ಬಂದಿ ವರ್ಗದವರ ಮುಷ್ಕರದಿಂದ ಜಿಲ್ಲೆಯಲ್ಲಿ ತುರ್ತು ಆರೋಗ್ಯ ಸೇವೆಗೆ ಯಾವುದೇ ತೊಂದರೆ ಉಂಟಾಗಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಕೃಷ್ಣ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.