ಕನ್ನಡ ವಾರ್ತೆಗಳು

ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ : ಇಬ್ಬರ ಬಂಧನ.

Pinterest LinkedIn Tumblr

rape_attpt_acused

ಕಾಸರಗೋಡು, ಫೆ.04: ಅಪ್ರಾಪ್ತ ವಯಸ್ಕ ಬಾಲಕರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಇಬ್ಬರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಎರಿಯಾಲ್ ನಿವಾಸಿ ಮಹಮ್ಮದ್ ಶಿಹಾಬ್ (20) ಮತ್ತು ಆಜಾದ್ ನಗರ ನಿವಾಸಿ ಹಮೀದ್ (32) ಎಂದು ಗುರುತಿಸಲಾಗಿದೆ.

ಕೆಲವು ದಿನಗಳ ಹಿಂದೆ ಆರೋಪಿಗಳು ಎರಿಯಾಲ್‌ನ 12 ವರ್ಷ ಪ್ರಾಯದ ಇಬ್ಬರು ಮಕ್ಕಳನ್ನು ಬಲವಂತದಿಂದ ಗುಡ್ಡ ಪ್ರದೇಶವೊಂದಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಮಕ್ಕಳ ಹೆತ್ತವರು ಪೊಲೀಸರಲ್ಲಿ ದೂರು ಸಲ್ಲಿಸಿದ್ದರು.

ಪ್ರಕರಣವನ್ನು ದಾಖಲಿಸಿಕೊಂಡಿದ್ದ ಕಾಸರಗೋಡು ಪೊಲೀಸರು ಲಭ್ಯ ಮಾಹಿತಿಗಳ ಆಧಾರದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ತನಿಖೆ ಮುಂದುವರಿದಿದೆ.

Write A Comment