ಮಂಗಳೂರು,ಫೆ.09 : ನಗರದ ಆಕಾಶಭವನದಲ್ಲಿ ಗಾಂಜಾ ಸೇವಿಸಿ ಅನುಮಾನ್ಪದವಾಗಿ ತಿರುಗಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಕಾವೂರು ಠಾಣಾ
ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನರೇಶ್(29), ಅಭಿಲಾಷ್(33), ಜಗದೀಶ್(30) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳು ಕಾವೂರು ಠಾಣಾ ವ್ಯಾಪ್ತಿಯ ಆಕಾಶಭವನದ ಬಳಿ ಗಾಂಜ ಸೇವಗೈದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಸಂಧರ್ಭ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.