ಕನ್ನಡ ವಾರ್ತೆಗಳು

ರಿಕ್ಷಾ, ದ್ವಿಚಕ್ರ ಮುಖಾಮುಖಿ : ಸವಾರಿಬ್ಬರು ಗಂಭೀರ ಗಾಯ

Pinterest LinkedIn Tumblr

baik_riskw_acdent

ಬಂಟ್ವಾಳ,ಏ.04 : ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರಿಬ್ಬರು ಗಂಭೀರಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡು ಮೇಲ್ಸೇತುವೆಯಲ್ಲಿ ಭಾನುವಾರ ಅಪರಾಹ್ನ ನಡೆದಿದೆ.

ಗಂಭೀರ ಗಾಯಗೊಂಡ ಸವಾರ ಹಾಗೂ ಸಹಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಸರು ತಿಳಿದು ಬಂದಿಲ್ಲ. ರಿಕ್ಷಾ ದಲ್ಲಿದ್ದ ಮೂವರಿಗೂ ಅಪಘಾತದಲ್ಲಿ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ದ್ವಿಚಕ್ರ ವಾಹನ ಸವಾರರು ಮೇಲ್ಸೇತುವೆಯಲ್ಲಿ ಕೈಕಂಬ ಕಡೆಗೆ ತೆರಳುತ್ತಿದ್ದು, ಇದೇ ವೇಳೆ ವಿರುದ್ದ ದಿಕ್ಕಿನಲ್ಲಿ ಬಂದ ರಿಕ್ಷಾ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಏಕಮುಖ ಸಂಚಾರಕ್ಕೆ ಅವಕಾಶ ವಿರುವ ಮೇಲ್ಸೇತುವೆಯಲ್ಲಿ ರಿಕ್ಷಾ ವಿರುದ್ದ ದಿಕ್ಕಿನಲ್ಲಿ ಬಂದಿರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರಯ್ಯ ಸ್ಥಳಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ನುಜ್ಜುಗುಜ್ಜಾಗಿದೆ

Write A Comment