ಮಂಗಳೂರು,ಎ.12: ಸಹಾಯಕ ಆಯುಕ್ತರಿಂದ ಅನುಮತಿ ಪಡೆಯದ ಸುಡುಮದ್ದು ಪ್ರದರ್ಶನ ಮಾಡಿದಲ್ಲಿ ಅಂತಹ ವ್ಯಕ್ತಿಯ ವಿರುದ್ಧ ಸ್ಪೋಟಕ ನಿಯಮ -2008 ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
ಕೇರಳ ಕೊಲ್ಲಂನಲ್ಲಿ ಎ.10ರಂದು ಸಂಭವಿಸಿದ ಘಟನೆ, ಈ ಹಿಂದೆ ದ.ಕ ಜಿಲ್ಲೆ ಹಾಗೂ ಬೇರೆ ಜಿಲ್ಲೆಗಳಲ್ಲಿ ಸಂಭವಿಸಿದ ದುರ್ಘಟನೆಗಳನ್ನು ಆಧರಿಸಿ ಸುಡ್ಡುಮದ್ದು ಬಗ್ಗೆ ಸೂಕ್ತ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎ.ಬಿ ಇಬ್ರಾಹೀಂ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ಜರಗಿತು.
ಪೊಲೀಸ್ ಅಯುಕ್ತರು, ಪೊಳಿಸ್ ಅಧೀಕ್ಷಕರು, ಆಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.