ಮ೦ಗಳೂರು, ಮೇ.03: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಗಳೂರು ತಾಲೂಕಿನ ಕುಪ್ಪೆಪದವು (ಈಗಿನ ಮುತ್ತೂರು) ಹಾಗೂ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯತ್‌ಗಳ ಮಧ್ಯೆ ಸಂಪರ್ಕ ಕಲ್ಪಿಸುವ ತೂಗುಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಿವೇದಿತ್ ಆಳ್ವ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಸ್ಥಳೀಯ ಗ್ರಾಮಸ್ಥರಿಗೆ ಕೊಟ್ಟ ಆಶ್ವಾಸನೆಯಂತೆ ಕುಪ್ಪೆಪದವು ತೂಗುಸೇತುವೆಯ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಫಲ್ಗುಣಿ ನದಿಯ ಎರಡು ದಂಡೆಯ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅತೀ ಉಪಯುಕ್ತವಾಗಿದೆ.
135 ಮೀಟರ್ ಉದ್ದದ ಹಾಗೂ ಎರಡು ಕಡೆ 1.20 ಮೀಟರ್ ಅಗಲದ ಈ ಸೇತುವೆಯು ಅಂದಾಜು ರೂ 146.59 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು 2016 ಜೂನ್‌ಗೆ ಕಾಮಗಾರಿ ಪೂರ್ಣಗೊಂಡು ತೂಗುಸೇತುವೆ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ನಿವೇದಿತ್ ಆಳ್ವ ತಿಳಿಸಿದರು.
ಈ ಸಂದರ್ಭದಲ್ಲಿ ಬಡಗಬೆಳ್ಳೂರು ಗ್ರಾಮ ಪಂಚಾಯತ್‌ನ ಉಪಧ್ಯಕ್ಷರಾದ ಯೋಗೀಶ್ ಪೂಜಾರಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜಾ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ನಿಂಗಸೆಟ್ಟಿ, ಉಪಸ್ಥಿತರಿದ್ದರು.