ಕನ್ನಡ ವಾರ್ತೆಗಳು

ಸೇಲಂ : ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ – ಐವರು ಸ್ಥಳದಲ್ಲೇ ಸಾವು

Pinterest LinkedIn Tumblr

fire3

ಸೇಲಂ,ಮೇ.4: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ಒಬ್ಬ ಚಾಲಕನೂ ಸೇರಿದ್ದಾನೆ. ಇಲ್ಲಿಗೆ ಸಮೀಪದ ತಾರ ಮಂಗಲಂನಲ್ಲಿರುವ ಕಾರ್ಖಾನೆಯೊಂದರಲ್ಲಿ ಕಾರ್ಮಿಕರು ಪಟಾಕಿ ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಈ ಸ್ಪೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಡೀ ಕಾರ್ಖಾನೆಗೆ ಬೆಂಕಿ ಆವರಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Write A Comment