ಬೆಂಗಳೂರು,ಮೇ.14 : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಕೆಲವು ಖಾಸಗಿ ವೆಬ್’ಸೈಟ್‌ಗಳು ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸುತ್ತೇವೆ ಎಂದು ಹಾಕಿಕೊಂಡಿರುವುದು ಸುಳ್ಳು ಸುದ್ದಿಯಾಗಿದೆ. ಅದನ್ನು ನಂಬಬೇಡಿ ಎಂದು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟಪಡಿಸಿದೆ.
ಮೇ 13 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ, ಫಲಿತಾಂಶದ ಕ್ರೋಢೀಕರಣ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿರುವುದರಿಂದ ಸ್ವಲ್ಪ ತಡವಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಖಾಸಗಿ ವೆಬ್’ಸೈಟ್‌ಗಳು ಪ್ರಕಟಿಸುವ ಮಾಹಿತಿಗೆ ಗಮನ ಹರಿಸಬೇಡಿ.
ಫಲಿತಾಂಶ ಪ್ರಕಟಣೆ ದಿನಾಂಕ ನಿಗದಿಯಾದಲ್ಲಿ ತಿಳಿಸುತ್ತೇವೆ. ಈಗಾಗಲೇ ತಿಳಿಸಿರುವಂತೆ ಮೇ 25ರೊಳಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅಜಯ್ ಸೇಠ್ ತಿಳಿಸಿದ್ದಾರೆ. ಮುಂದಿನ ವಾರದೊಳಗೆ ಫಲಿತಾಂಶ ಪ್ರಕಟಿಸುವುದು ಖಚಿತ ಎಂದು ಮೂಲಗಳು ತಿಳಿಸಿವೆ.