Photo: Ashok Belman
ಬಿಲ್ಲವ ಫ್ಯಾಮಿಲಿ ಬಳಗ ದುಬೈ ಇವರ ಆಶ್ರಯದಲ್ಲಿ ದುಬೈಯ ಝಬೀಲ್ ಪಾರ್ಕಿನಲ್ಲಿ ವಿಹಾರಕೂಟವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ದುಬೈ ಬಿಲ್ಲವ ಫ್ಯಾಮಿಲಿ ಬಳಗದ ಸತೀಶ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಸ್ಪರ್ಧೆಗಳಲ್ಲಿ, ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಭ್ರಮಿಸಿದರು. ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.
Comments are closed.