ದುಬೈ: ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದ ಹೆಜಮಾಡಿ ಬ್ರಹ್ಮಸ್ಥಾನ ಬಳಿಯ ಲೋಕೇಶ್ ಆನಂದ್ ಸುವರ್ಣ(44 ವರ್ಷ) ಎಂಬವರು ಮೇ 24 ರಂದು ಕೊರೋನಾ ವೈರಸ್’ಗೆ ಬಲಿಯಾಗಿದ್ದಾರೆ.
ಲೋಕೇಶ್ ಆನಂದ್ ಸುವರ್ಣ 8 ವರ್ಷಗಳಿಂದ ಅಬುಧಾಬಿಯ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅವರಿಗೆ ಇತ್ತೀಚೆಗೆ ಕೊರೋನಾ ವೈರಸ್ ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಯುಎಇಯಲ್ಲಿ ಕೊರೋನಾ ವೈರಸ್ ಆರ್ಭಟ ಜೋರಾಗಿದ್ದು, ಅವರು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ನೆಗೆಟಿವ್ ಬಂದಿತ್ತು. ಆದರೆ ದುರಾದೃಷ್ಟಕರ ವಾಗಿ ಮೂರನೇ ಬಾರಿಯ ಪರೀಕ್ಷೆ ವೇಳೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ಶೇಖ್ ಖಲೀಫಾ ಆಸ್ಪತ್ರೆಗೆ ಅವರು ದಾಖಲಿಸಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಹಾಗೂ ಪುತ್ರಿ ಪುಣೆದಲ್ಲಿದ್ದಾರೆ.
ಮೃತದೇಹವನ್ನು ಊರಿಗೆ ಕೊಂಡೊಯ್ಯಲು ಸಾಧ್ಯವಾಗದ ಕಾರಣ ಅಬುಧಾಬಿಯಲ್ಲೇ ಗೆಳೆಯರು ಮತ್ತು ಸಹೋದ್ಯೋಗಿಗಳ ಸಮ್ಮುಖ ಅಂತ್ಯಕ್ರಿಯೆ ನಡೆಸಲಾಯಿತು.
Comments are closed.