ಸತಾರ(ಮಹಾರಾಷ್ಟ್ರ): ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದವರ ಮೇಲೆ ಟ್ರಕ್‌ವೊಂದು ಉರುಳಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಸತಾರದ ಪರ್‌ಗಾವ್ ಖಂಡಾಲದ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್‌ಗಾಗಿ ಪ್ರಯಾಣಿಕರು ಕಾಯುತ್ತಿದ್ದರು. ಈ ವೇಳೆ ಕೊಲ್ಲಾಪುರ ಕಡೆಗೆ ತೆರಳುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಕೂಡಲೇ ಸತಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಾಗಿದೆ.