ರಾಷ್ಟ್ರೀಯ

ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್; ತೊಗಾಡಿಯಾಗೆ ಮುಖಭಂಗ

Pinterest LinkedIn Tumblr

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಕೈಗೊಳ್ಳುವ ನಿರ್ಧಾರಗಳಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಕ್ಕೆ ಬಯಸುವುದಿಲ್ಲ
– ಹೈಕೋರ್ಟ್
ತೊ

ಬೆಂಗಳೂರು, ಮಾ. 11: ವಿರಾಟ್ ಹಿಂದೂ ಸಮಾವೇ ಶದಲ್ಲಿ ಭಾಗವಹಿಸದಂತೆ ಸಮಾವೇಶ ನಡೆಯುವ ಆಯಾ ಜಿಲ್ಲಾಧಿಕಾರಿಗಳು ಹೇರಿದ್ದ ನಿರ್ಬಂಧ ಕ್ರಮ ವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತಿದ್ದ ವಿಶ್ವ ಹಿಂದೂ ಪರಿ ಷತ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ತೊಗಾಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆ ಸುತ್ತಿದ್ದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿರು ವುದರಿಂದ ಸತತ ಮೂರನೆ ಬಾರಿಯೂ ಮುಖಭಂಗಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಕೈಗೊಳ್ಳುವ ನಿರ್ಧಾರಗಳಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಕ್ಕೆ ಬಯಸುವುದಿಲ್ಲ ಎಂದು ತಿಳಿಸಿ ರುವ ಹೈಕೋರ್ಟ್, ತೊಗಾಡಿಯಾರಿಗೆ ನಿರ್ಬಂಧ ಹೇ ರಿದ್ದ ಜಿಲ್ಲಾಧಿಕಾರಿ ಕ್ರಮವನ್ನು ಎತ್ತಿ ಹಿಡಿದಿದೆ.
ಮೈಸೂರಿನಲ್ಲಿ ನಡೆಯುತ್ತಿದ್ದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಲು ತೊಗಾಡಿಯಾಗೆ ನಿರ್ಭಂಧ ಹೇರಿದ್ದ ಜಿಲ್ಲಾಧಿಕಾರಿಗಳ ಆದೇಶದ ಕ್ರಮ ವನ್ನು ನ್ಯಾಯಪೀಠ ಎತ್ತಿಹಿಡಿದಿದೆ.

ಅರ್ಜಿದಾರರಾದ ತೊಗಾಡಿಯಾ ವಿಷಯದಲ್ಲಿ ಜಿಲ್ಲಾಧಿಕಾರಿಯ ಆದೇಶಕ್ಕೆ ಸಂಬಂಧಿಸಿದಂತೆ ಮೇಲ್ಮ ನವಿ ಪ್ರಾಧಿಕಾರವಾಗಿ ಹೈಕೋರ್ಟ್ ಕಾರ್ಯ ನಿರ್ವಹಿಸುವುದು ಸರಿಯಲ್ಲ. ಜಿಲ್ಲಾಧಿಕಾರಿಗಳ ಆದೇಶ ಕಾನೂನು ವ್ಯಾಪ್ತಿಯನ್ನು ಮೀರಿಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯ ದುರುದ್ದೇಶವನ್ನು ಹೊಂದಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಅಲ್ಲದೆ, ನಿರ್ಬಂಧ ಹೇರಿರುವ ಕ್ರಮಕ್ಕೆ ತಡೆ ನೀಡು ವುದಕ್ಕೆ ಸೂಕ್ತ ಪ್ರಕರಣವಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿರುವ ನ್ಯಾಯಪೀಠ, ಜಿಲ್ಲಾಧಿಕಾರಿಗಳ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

Write A Comment