ರಾಷ್ಟ್ರೀಯ

ರಾಜಕೀಯ ತಿರುವು ಪಡೆದುಕೊಂಡ ದೆಹಲಿಯಲ್ಲಿ ರೈತ ಆತ್ಮಹತ್ಯೆ; ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ

Pinterest LinkedIn Tumblr

protest

ನವದೆಹಲಿ: ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿ ವೇಳೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ರ್ಯಾಲಿ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ದೆಹಲಿ ಪೊಲೀಸ್ ಪ್ರಧಾನ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಉತ್ತರ ದೆಹಲಿಯಲ್ಲಿರುವ ಕೇಜ್ರಿವಾಲ್ ಅವರ ನಿವಾಸ ಬಳಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ 10ಗಂಟೆಯಿಂದ ಧರಣಿ ಕುಳಿತಿದ್ದು, ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ದೆಹಲಿ ಪ್ರಧಾನ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಸಹ ಐಟಿಒದಿಂದ ಕೇಜ್ರಿವಾಲ್ ಅವರ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ.

ಈ ವೇಳೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರು, ರೈತನ ಆತ್ಮಹತ್ಯೆ ಘಟನೆಯ ಹಿಂದೆ ಪಿತೂರಿ ಇದೆ ಮತ್ತು ರ್ಯಾಲಿ ಆಯೋಜಕರ ವಿರುದ್ಧ ಕೊಲೆ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

Write A Comment